ಫೆಬ್ರವರಿ 18ರಂದು ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿಗೆ 1097 ಆಟಗಾರರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದ್ರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಗ ಅರ್ಜುನ್ ತೆಂಡೂಲ್ಕರ್ ಹೆಸರಿದೆ. 814 ಭಾರತೀಯ ಆಟಗಾರರು ಹಾಗೂ 283 ವಿದೇಶಿ ಆಟಗಾರರು ಐಪಿಎಲ್ ಹರಾಜಿಗೆ ಹೆಸರು ನೋಂದಾಯಿಸಿದ್ದಾರೆಂದು ಬಿಸಿಸಿಐ ಹೇಳಿದೆ.
ಈ ಬಾರಿ ಐಪಿಎಲ್ ನಲ್ಲಿ ಅರ್ಜುನ್ ತೆಂಡೂಲ್ಕರ್ ಆಟ ನೋಡಲು ಸಿಗುವ ಸಾಧ್ಯತೆಯಿದೆ. ಮಾಧ್ಯಮದ ವರದಿಯೊಂದರ ಪ್ರಕಾರ, ಅರ್ಜುನ್ ತೆಂಡೂಲ್ಕರ್ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅವ್ರ ಮೂಲ ಬೆಲೆ 20 ಲಕ್ಷ ರೂಪಾಯಿ ಎನ್ನಲಾಗಿದೆ. ಅರ್ಜುನ್ ತೆಂಡೂಲ್ಕರ್ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ನೆಟ್ ಬೌಲರ್ ಆಗಿದ್ದಾರೆ. ಈ ವರ್ಷ ಮುಂಬೈ ಪರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲೂ ಆಡಿದ್ದಾರೆ. ಎಡಗೈ ವೇಗದ ಬೌಲರ್ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಪಂದ್ಯ ವಿಶೇಷವಾಗೇನು ಇರಲಿಲ್ಲ. ಮೂರು ಓವರ್ ಗಳಲ್ಲಿ 34 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು.
ಶುಭ ಸುದ್ದಿ: ಟೆಸ್ಟ್ ಇಲ್ಲದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇಲ್ಲಿದೆ ಮಾಹಿತಿ
ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಮುಗಿದ ಮರುದಿನ ಹರಾಜು ನಡೆಯಲಿದೆ. ಕಿಂಗ್ಸ್ ಇಲವೆನ್ ಪಂಜಾಬ್ 53.20 ಕೋಟಿಯೊಂದಿಗೆ ಹರಾಜಿಗಿಳಿಯಲಿದೆ.