alex Certify ಈ ಕಾರಣಕ್ಕೆ ರೋಹಿತ್​ ಶರ್ಮಾಗೆ ಬಿತ್ತು ಬರೋಬ್ಬರಿ 12 ಲಕ್ಷ ರೂ. ದಂಡ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಕಾರಣಕ್ಕೆ ರೋಹಿತ್​ ಶರ್ಮಾಗೆ ಬಿತ್ತು ಬರೋಬ್ಬರಿ 12 ಲಕ್ಷ ರೂ. ದಂಡ..!

ಮಂಗಳವಾರ ದೆಹಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್​ ಪಂದ್ಯದಲ್ಲಿ ಸ್ಲೋ ಓವರ್ ರೇಟ್​​ ಮಾಡಿದ್ದಕ್ಕಾಗಿ ರೋಹಿತ್​ ಶರ್ಮಾಗೆ ಬರೋಬ್ಬರಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದ್ದ ಮುಂಬೈ ಇಂಡಿಯನ್ಸ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 138 ರನ್​ಗಳ ಗುರಿ ನೀಡಿತ್ತು.

ಈ ಗುರಿಯನ್ನ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್​ ಕೇವಲ 4 ವಿಕೆಟ್​ ನಷ್ಟಕ್ಕೆ 138 ರನ್​ಗಳನ್ನ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನ ಮಣಿಸಿದೆ.

ಚೆನ್ನೈನ ಎಂ.ಎ. ಚಿದಂಬರಂ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಿಧಾನಗತಿಯಲ್ಲಿ ಆಟವನ್ನ ನಿರ್ವಹಿಸಿದ್ದಾರೆ ಎಂಬ ಕಾರಣಕ್ಕೆ ತಂಡದ ನಾಯಕ ರೋಹಿತ್​ ಶರ್ಮಾಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...