ದುಬೈ: ಐಪಿಎಲ್ 14ನೇ ಆವೃತ್ತಿಯ ಫೈನಲ್ ಹಣಾಹಣಿಗೆ ದುಬೈ ಅಂತರಾಷ್ಟ್ರೀಯ ಸ್ಟೇಡಿಯಂ ಸಿದ್ಧವಾಗಿದೆ. ದಾಖಲೆಯ 9ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.
2010, 11 ಮತ್ತು 18 ರಲ್ಲಿ ಚಾಂಪಿಯನ್ ಆಗಿದ್ದ ಚೆನ್ನೈ ತಂಡ ಕಳೆದ ಆವೃತ್ತಿಯಲ್ಲಿ ಲೀಗ್ ಹಂತದಲ್ಲೇ ಮುಗ್ಗರಿಸಿತ್ತು. ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್ ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದ್ದು, ಟ್ರೋಫಿ ಗೆಲ್ಲುವ ಉತ್ಸಾಹದಲ್ಲಿದೆ.
ರಾತ್ರಿ 7:30 ಕ್ಕೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಹಣಾಹಣಿ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ.