alex Certify ಐಪಿಎಲ್ ಪ್ರೇಮಿಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಪ್ರೇಮಿಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಖುಷಿ ಸುದ್ದಿ

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕೊರೊನಾ ಐಪಿಎಲ್ ಗೆ ಕರಿನೆರಳಾಗಬಹುದು ಎನ್ನಲಾಗ್ತಿತ್ತು. ಆದ್ರೆ ಮುಂಬೈನಲ್ಲಿ ನಡೆಯುವ ಪಂದ್ಯಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲವೆಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಪ್ರೇಕ್ಷಕರು ಮೈದಾನಕ್ಕೆ ಬರಲು ಅವಕಾಶವಿಲ್ಲ. ಖಾಲಿ ಮೈದಾನದಲ್ಲಿ ಪಂದ್ಯ ನಡೆಯಬೇಕೆಂದು ಮಹಾರಾಷ್ಟ್ರ ಸರ್ಕಾರ ಸೂಚನೆ ನೀಡಿದೆ.

ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್ ಐಪಿಎಲ್ ಪಂದ್ಯಗಳ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ಕಾರ್ಯಕ್ರಮಕ್ಕೆ ಅನುಮೋದನೆ ನೀಡಲಾಗಿದೆ ಎಂದವರು ಹೇಳಿದ್ದಾರೆ. ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಹೋಗಲು ಅವಕಾಶವಿರುವುದಿಲ್ಲ. ಬಯೋ ಬಬಲ್‌ನಲ್ಲಿ ಆಟಗಾರರು ಮತ್ತು ಉಳಿದ ಸಿಬ್ಬಂದಿಯನ್ನು ಪ್ರತ್ಯೇಕಿಸಬೇಕಾಗುತ್ತದೆ ಎಂದವರು ಹೇಳಿದ್ದಾರೆ.

ಆಟಗಾರರಿಗೆ ಲಸಿಕೆ ನೀಡುವಂತೆ ಬಿಸಿಸಿಐ ಒತ್ತಾಯಿಸಿದೆ ಎಂದು ನವಾಬ್ ಮಲಿಕ್ ಹೇಳಿದ್ದಾರೆ. ಆದರೆ ಐಸಿಎಂಆರ್ ಮಾರ್ಗಸೂಚಿಗಳಿಂದಾಗಿ ಇದು ಸಾಧ್ಯವಿಲ್ಲ. 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ಹಾಕಲು ಸಾಧ್ಯವಿಲ್ಲವೆಂದು ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಾಗಿದೆ. ಕೆಲ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಇದು ಐಪಿಎಲ್ ಪಂದ್ಯಗಳ ಬಗ್ಗೆ ಅನುಮಾನ ಹುಟ್ಟಿಹಾಕಿತ್ತು. ಮುಂಬೈ ಬದಲು ಹೈದ್ರಾಬಾದ್ ನಲ್ಲಿ ಪಂದ್ಯ ನಡೆಯಲಿದೆ ಎನ್ನಲಾಗಿತ್ತು. ಇದಕ್ಕೆ ಮಹಾರಾಷ್ಟ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಏಪ್ರಿಲ್ 10ರಿಂದ ಏಪ್ರಿಲ್ 24ರವರೆಗೆ ಮುಂಬೈನಲ್ಲಿ ಪಂದ್ಯ ನಡೆಯಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...