ಚೆನ್ನೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಎಂ.ಎಸ್. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಕಂಡಿದೆ.
ಸೋಲಿನ ಬೆನ್ನಲ್ಲೇ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಈ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಗೆಲುವಿನ ಗುರಿ ಬೆನ್ನತ್ತಿ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬೌಲಿಂಗ್ ಮಾಡುವಾಗ ಚೆನ್ನೈ ತಂಡದಿಂದ ನಿಧಾನಗತಿಯಲ್ಲಿ ಬೌಲಿಂಗ್ ಮಾಡಲಾಗಿದೆ. ನಿಗದಿತ ಸಮಯಕ್ಕೆ ಪಂದ್ಯ ಮುಗಿಸದ ಕಾರಣ ಐಪಿಎಲ್ ಆಯೋಜಕರು ನೋಟಿಸ್ ನೀಡಿ, ದಂಡ ವಿಧಿಸಿದ್ದಾರೆ. ಈ ಪಂದ್ಯದಲ್ಲಿ ಧೋನಿ ಡಕ್ ಔಟ್ ಆಗಿದ್ದರು. ಇದರ ಬೆನ್ನಲ್ಲೇ ಅವರಿಗೆ ದಂಡ ಹಾಕಲಾಗಿದೆ.