alex Certify 2021ರ ಐಪಿಎಲ್ ಆಟಗಾರರ ಹರಾಜಿಗೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2021ರ ಐಪಿಎಲ್ ಆಟಗಾರರ ಹರಾಜಿಗೆ ಮುಹೂರ್ತ ಫಿಕ್ಸ್

ಐಪಿಎಲ್ 2021ರ ಹರಾಜು ಪ್ರಕ್ರಿಯೆಗೆ ಮುಹೂರ್ತ ಫಿಕ್ಸ್ ಆಗಿದೆ. ಬಿಸಿಸಿಐ ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ ಪ್ರಕಟಿಸಿದೆ. ಫೆಬ್ರವರಿ 18ರಂದು ಐಪಿಎಲ್ ಆಟಗಾರರ ಹರಾಜು ನಡೆಯಲಿದೆ. ಚೆನ್ನೈನಲ್ಲಿಯೇ ಹರಾಜು ಪ್ರಕ್ರಿಯೆ ನಡೆಯಲಿದೆ. ಇಂಗ್ಲೆಂಡ್ ವಿರುದ್ಧ ಮೊದಲ ಹಾಗೂ ಎರಡನೇ ಟೆಸ್ಟ್ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ. ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 17ರಂದು ಕೊನೆಗೊಳ್ಳಲಿದೆ. ಎರಡನೇ ಟೆಸ್ಟ್ ಮುಕ್ತಾಯಗೊಂಡ ಮರುದಿನ ಐಪಿಎಲ್ ಹರಾಜು ನಡೆಯಲಿದೆ.

ಆಟಗಾರರನ್ನು ಉಳಿಸಿಕೊಳ್ಳಲು ಜನವರಿ 20 ಕೊನೆಯ ದಿನವಾಗಿದೆ. ಒಂದು ತಂಡದಿಂದ ಆಟಗಾರರನ್ನು ಇನ್ನೊಂದು ತಂಡಕ್ಕೆ ವರ್ಗಾಯಿಸಲು ಫೆಬ್ರವರಿ 4ರವರೆಗೆ ಅವಕಾಶವಿದೆ. ತಂಡದಿಂದ ಹೊರಬಿದ್ದ ಆಟಗಾರರ ಪಟ್ಟಿಯಲ್ಲಿ ಸ್ಟಿವ್ ಸ್ಮಿತ್ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಸೇರಿದ್ದಾರೆ.

2021ರ ಐಪಿಎಲ್ ಹರಾಜು ಪ್ರಕ್ರಿಯೆ ಹೆಚ್ಚು ಕುತೂಹಲಕರವಾಗಿರಲಿದೆ. ರಾಜಸ್ತಾನ ರಾಯಲ್ಸ್ ತಮ್ಮ ತಂಡದ ನಾಯಕ ಸ್ಟೀವ್ ಸ್ಮಿತ್ ಅವರನ್ನು ಬಿಡುಗಡೆ ಮಾಡಿದೆ. ಹಾಗೆ ಟಿ-20 ದಿಗ್ಗಜ ಗ್ಲೆನ್ ಮ್ಯಾಕ್ಸ್ ಕೂಡ ಹರಾಜಾಗಲಿದ್ದಾರೆ. ಯಾವ ತಂಡ, ಯಾವ ಆಟಗಾರರನ್ನು ಎಷ್ಟು ಮೊತ್ತಕ್ಕೆ ಖರೀದಿ ಮಾಡಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...