alex Certify IPL: ಮೊದಲ ಪಂದ್ಯದಲ್ಲೇ ಸಂಜು ಸ್ಯಾಮ್ಸನ್ ಹೊಸ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ಮೊದಲ ಪಂದ್ಯದಲ್ಲೇ ಸಂಜು ಸ್ಯಾಮ್ಸನ್ ಹೊಸ ದಾಖಲೆ

ನಿನ್ನೆ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಕೇವಲ 4 ರನ್ ಗಳಿಂದ ರೋಚಕ ಜಯ ಸಾಧಿಸಿತು.

ಈ ರೋಮಾಂಚಕಾರಿ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಗೆ ಕ್ರಿಕೆಟ್ ಪ್ರೇಮಿಗಳು ಫಿದಾ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಕ್ರಿಕೆಟಿಗರು ಸಂಜು ಸ್ಯಾಮ್ಸನ್ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂಚೆ ಕಚೇರಿಯ ಸ್ಮಾರ್ಟ್ ಅಪ್ಲಿಕೇಷನ್ ನಲ್ಲಿ ಸಿಗ್ತಿದೆ ಈ ಎಲ್ಲ ಮಾಹಿತಿ

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 221ರನ್ ಗಳ ಬೃಹತ್‌ ಮೊತ್ತ ದಾಖಲಿಸಿತು. ಇದನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ನಾಯಕ ಸಂಜು ಸ್ಯಾಮ್ಸನ್ ಕೊನೆ ಹಂತದವರೆಗೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 63 ಎಸೆತಗಳಲ್ಲಿ 119 ರನ್ ಗಳ ಭರ್ಜರಿ ಶತಕ ಸಿಡಿಸಿದರು. ಇವರ ಈ ಸ್ಫೋಟಕ ಇನಿಂಗ್ಸ್ ನಲ್ಲಿ 12 ಬೌಂಡರಿ ಹಾಗೂ 7 ಸಿಕ್ಸರ್ ಗಳು ಸೇರಿದ್ದು, ಇದು ಈ ಬಾರಿ ಐಪಿಎಲ್ ನ ಮೊದಲನೇ ಶತಕವಾಗಿದೆ. ಮತ್ತೊಂದೆಡೆ ಐಪಿಎಲ್ ನಲ್ಲಿ ತಂಡದ ನಾಯಕನಾದ ಮೊದಲನೇ ಪಂದ್ಯದಲ್ಲೇ ಶತಕ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...