ಮುಂಬೈ: ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣ ಸಾಮರ್ಥ್ಯದ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.
ಏಪ್ರಿಲ್ 6 ರಿಂದ ಐಪಿಎಲ್ ಪಂದ್ಯಗಳಿಗೆ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗುವುದು ಎಂದು ಐಪಿಎಲ್ ಟಿಕೆಟ್ ಪಾಲುದಾರ ಸಂಸ್ಥೆ ಬುಕ್ ಮೈ ಶೋ ತಿಳಿಸಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣ, ಬ್ರಬೋರ್ನ್ ಕ್ರೀಡಾಂಗಣ, ನವಿಮುಂಬೈನ ಡಿ.ವೈ. ಪಾಟೀಲ ಸ್ಟೇಡಿಯಂ, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯುವ ಆರಂಭಿಕ ಪಂದ್ಯಗಳನ್ನು ವೀಕ್ಷಿಸಲು ಶೇ. 25 ರಷ್ಟು ಪ್ರೇಕ್ಷಕರಿಗೆ ಮಹಾರಾಷ್ಟ್ರ ಸರ್ಕಾರ ಅವಕಾಶ ನೀಡಿದೆ.
ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ನಿರ್ಬಂಧಗಳನ್ನು ತೆರವುಗೊಳಿಸಲಾಗುತ್ತಿದೆ. ಇದರಿಂದ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣದ ಸಾಮರ್ಥ್ಯದ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.