ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮತ್ತೆ ಎಂ.ಎಸ್. ಧೋನಿ ಮುನ್ನಡೆಸಲಿದ್ದಾರೆ. ಧೋನಿಗೆ ರವೀಂದ್ರ ಜಡೇಜಾ ಮತ್ತೆ ನಾಯಕತ್ವ ಬಿಟ್ಟುಕೊಟ್ಟಿದ್ದಾರೆ. ಚೆನ್ನೈ ತಂಡವನ್ನು ಎಂ.ಎಸ್. ಧೋನಿ ಅವರೇ ಮತ್ತೆ ಮುನ್ನಡೆಸಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ತಮ್ಮ ಆಟದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ನಡೆಯುತ್ತಿರುವ ಋತುವಿನ ಉಳಿದ ಪಂದ್ಯಗಳಿಗೆ ತಂಡವನ್ನು ಮುನ್ನಡೆಸಲು ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ವಿನಂತಿಸಿದ್ದಾರೆ.
40ರ ಹರೆಯದ ಧೋನಿ ಸಿ.ಎಸ್.ಕೆ.ಯನ್ನು ಹೆಚ್ಚಿನ ಆಸಕ್ತಿಯಿಂದ ಮುನ್ನಡೆಸಲು ಒಪ್ಪಿಕೊಂಡಿದ್ದಾರೆ. ಜಡೇಜಾ ಅವರ ಆಟದ ಮೇಲೆ ಕೇಂದ್ರೀಕರಿಸಲು ಅವಕಾಶ ನೀಡಿದ್ದಾರೆ.
ಹಾಲಿ ಚಾಂಪಿಯನ್ ಚೆನ್ನೈ ತಂಡ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಎರಡನ್ನು ಮಾತ್ರ ಗೆದ್ದಿದ್ದು,. ಲೀಗ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.