alex Certify IPL ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ

ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಎಲ್ಲಾ ಚಟುವಟಿಕೆಗಳು ಬಂದ್ ಆಗಿವೆ. ಮೇ 31 ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.

ಕೊರೋನಾ ಲಾಕ್ ಡೌನ್ ಕಾರಣದಿಂದ ಕ್ರೀಡಾಕೂಟಗಳು, ಟೂರ್ನಿಗಳು ಕೂಡ ಬಂದ್ ಆಗಿವೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಕ್ಷಣಕ್ಕೆ ಭಾರತದಲ್ಲಿ ಯಾವುದೇ ಅಂತರರಾಷ್ಟ್ರೀಯ ಕ್ರೀಡಾಕೂಟ ಟೂರ್ನಿಗಳು ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಈ ವರ್ಷ ಒಂದಾದರೂ ಟೂರ್ನಿ ನಡೆಯಲಿದೆ ಎಂದು ಹೇಳುವ ಮೂಲಕ ಐಪಿಎಲ್ ನಡೆಯುವ ಬಗ್ಗೆ ಸುಳಿವು ನೀಡಿದ್ದಾರೆ. ಇದೇ ವರ್ಷ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ಮುಂದೂಡಿದರೆ ಅದೇ ಅವಧಿಯಲ್ಲಿ ಐಪಿಎಲ್ ಆಯೋಜಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಯೋಜನೆ ರೂಪಿಸುತ್ತಿದೆ.

ಇದೇ ವೇಳೆ ಕ್ರೀಡಾ ಸಚಿವ ಕಿರಣ್ ರಿಜಿಜು, ಈ ವರ್ಷ ಒಂದಾದರೂ ಟೂರ್ನಿ ನಡೆಯಲಿದೆ ಎಂದು ಹೇಳಿರುವುದು ಐಪಿಎಲ್ ನಡೆಯುವ ಸುಳಿವು ನೀಡಿದಂತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...