alex Certify BIG BREAKING NEWS: ಏ. 9 ರಿಂದಲೇ IPL, ಮೊದಲ ಪಂದ್ಯದಲ್ಲೇ ಮುಂಬೈ –RCB ಬಿಗ್ ಫೈಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಏ. 9 ರಿಂದಲೇ IPL, ಮೊದಲ ಪಂದ್ಯದಲ್ಲೇ ಮುಂಬೈ –RCB ಬಿಗ್ ಫೈಟ್

2021 ರ ಐಪಿಎಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 9 ರಂದು ಚೆನ್ನೈನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಉದ್ಘಾಟನೆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್ಸಿಬಿ ಮುಖಾಮುಖಿಯಾಗಲಿವೆ.

ಆರು ರಾಜ್ಯಗಳಲ್ಲಿ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಬೆಂಗಳೂರು, ಅಹಮದಾಬಾದ್, ಚೆನ್ನೈ, ಮುಂಬೈ, ಕೊಲ್ಕತ್ತಾ, ದೆಹಲಿಯಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲಾಗುವುದು. ಟೂರ್ನಿಯಲ್ಲಿ ಒಟ್ಟು 56 ಪಂದ್ಯಗಳು ನಡೆಯಲಿದೆ. ಮೇ 30 ರೊಳಗೆ ಪಂದ್ಯಗಳನ್ನು ಮುಗಿಸಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ.

ಐಪಿಎಲ್ 14ನೇ ಆವೃತ್ತಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 9 ರಂದು ಆರಂಭವಾಗಲಿದೆ. ಅಹಮದಾಬಾದ್ ನ  ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ಮೇ 30 ರಂದು ನಡೆಯಲಿದೆ. ಎರಡು ವರ್ಷಗಳ ನಂತರ ದೇಶದಲ್ಲಿ ಐಪಿಎಲ್ ನಡೆಯುತ್ತಿದೆ. ಕಳೆದ ಟೂರ್ನಿಯನ್ನು ಕೊರೋನಾ ಕಾರಣದಿಂದ ಯುಎಇನಲ್ಲಿ ನಡೆಸಲಾಗಿತ್ತು. ಈ ಬಾರಿ ಕೊರೋನಾ ಸುರಕ್ಷತೆ, ಮುನ್ನೆಚ್ಚರಿಕೆಯೊಂದಿಗೆ ಐಪಿಎಲ್ 14 ನೇ ಆವೃತ್ತಿ ದೇಶದಲ್ಲೇ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...