ಚೆನ್ನೈ: ಐಪಿಎಲ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರ್ಷಲ್ ಪಟೇಲ್ 4 ಓವರ್ ನಲ್ಲಿ ಕೇವಲ 27 ರನ್ ನೀಡಿ 5 ವಿಕೆಟ್ ಗಳಿಸಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್ ಗೊಂಚಲು ಪಡೆದ ಮೊದಲ ಬೌಲರ್ ಎನ್ನುವ ದಾಖಲೆಗೆ ಹರ್ಷಲ್ ಪಟೇಲ್ ಅವರು ಪಾತ್ರರಾಗಿದ್ದಾರೆ.
ಈ ಪಂದ್ಯದಲ್ಲಿ ಹೊಸ ಪ್ರಯೋಗ ನಡೆಸಿದ ಆರ್ಸಿಬಿ ವಾಷಿಂಗ್ಟನ್ ಸುಂದರ್ ಅವರನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿತು.
ಹಾಲಿ ಚಾಂಪಿಯನ್ ಮುಂಬೈ ಈ ಪಂದ್ಯದಲ್ಲಿ ಸೋಲುವ ಮೂಲಕ ಸತತ 9 ವರ್ಷ ಮೊದಲ ಪಂದ್ಯದಲ್ಲಿ ಸೋಲು ಕಂಡ ದಾಖಲೆ ಬರೆದಿದೆ.
ಈ ಪಂದ್ಯದಲ್ಲಿ ರನ್ ಹೊಳೆ ಹರಿಯದಿದ್ದರೂ ಕೊನೆವರೆಗೂ ರೋಚಕತೆಯಿಂದ ಕೂಡಿತ್ತು. ಮುಂಬೈ ವಿರುದ್ಧ ಕೊನೆ ಎಸೆತದಲ್ಲಿ RCB ಎರಡು ವಿಕೆಟ್ ಜಯ ಗಳಿಸಿದೆ.