ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸೆಪ್ಟಂಬರ್ 19 ರಂದು ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ದುಬೈ, ಅಬುದಾಭಿ ಮತ್ತು ಶಾರ್ಜಾದಲ್ಲಿ 53 ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ. 8 ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದೆ.
ಅಬುಧಾಬಿಯಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಟೂರ್ನಿಮೆಂಟ್ ಉದ್ಘಾಟನೆಯ ನಂತರ ಮೊದಲ ಪಂದ್ಯ ನಡೆಯಲಿದೆ. ಎರಡನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹೈದರಾಬಾದ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲಿವೆ.