ಏಪ್ರಿಲ್ 9 ರಿಂದ 30 ರವರೆಗೆ ಐಪಿಎಲ್ ಪಂದ್ಯಾವಳಿ ನಡೆಯಲಿದ್ದು, ಬೆಂಗಳೂರಿನಲ್ಲಿಯೂ ಪಂದ್ಯಗಳನ್ನು ಆಯೋಜಿಸಲಾಗುವುದು ಎಂದು ಹೇಳಲಾಗಿದೆ.
ಕೊರೋನಾ ಕಾರಣದಿಂದಾಗಿ ಕಳೆದ ಟೂರ್ನಿಯನ್ನು ಯುಎಇನಲ್ಲಿ ನಡೆಸಲಾಗಿದ್ದು, ದುಬೈ, ಶಾರ್ಜಾ, ಅಬುದಾಬಿ ಕ್ರೀಡಾಂಗಣಗಳಲ್ಲಿ ಐಪಿಎಲ್ ಪಂದ್ಯಗಳು ನಡೆದಿದ್ದವು. ಈ ಸಲ ದೇಶದಲ್ಲೇ ಐಪಿಎಲ್ ನಡೆಯಲಿದ್ದು, ಏಪ್ರಿಲ್ 9 ಚೆನ್ನೈ, ಮುಂಬೈ, ಕೊಲ್ಕತ್ತಾ, ದೆಹಲಿ, ಬೆಂಗಳೂರು ಸೇರಿದಂತೆ ಆರು ಸ್ಥಳಗಳಲ್ಲಿ ಪಂದ್ಯ ನಡೆಯಲಿವೆ ಎನ್ನಲಾಗಿದೆ.
ಏಪ್ರಿಲ್ 9 ರಿಂದ ಮೇ 30 ರವರೆಗೆ 52 ದಿನಗಳ ಕಾಲ 60 ಪಂದ್ಯ ನಡೆಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಎಲ್ಲ ಮುಂಜಾಗ್ರತೆ, ಸುರಕ್ಷತಾ ಕ್ರಮಗಳೊಂದಿಗೆ ಪಂದ್ಯಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ರಿಕೆಟ್ ಲೋಕದ ವರ್ಣರಂಜಿತ ಹಬ್ಬ ಎಂದೇ ಹೇಳಲಾಗುವ ಐಪಿಎಲ್ ಶುರುವಾಗುತ್ತಿರುವುದು ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ ಎನ್ನಲಾಗಿದೆ.