alex Certify ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಐಪಿಎಲ್ ಟೂರ್ನಿ ಬಗ್ಗೆ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಐಪಿಎಲ್ ಟೂರ್ನಿ ಬಗ್ಗೆ ಮಹತ್ವದ ನಿರ್ಧಾರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 13ನೇ ಆವೃತ್ತಿ ಸೆಪ್ಟಂಬರ್ 19 ರಿಂದ ಆರಂಭವಾಗಲಿದೆ. ನವೆಂಬರ್ 8ರ ಬದಲಿಗೆ ನವೆಂಬರ್ 10 ರಂದು ಫೈನಲ್ ಪಂದ್ಯವನ್ನು ನಡೆಸಲು ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಚೀನಾದ ಮೊಬೈಲ್ ಕಂಪನಿ ವಿವೋ ಪ್ರಾಯೋಜಕತ್ವ ಮುಂದುವರೆಸಲು ತೀರ್ಮಾನಿಸಲಾಗಿದೆ. 53 ದಿನಗಳ ಕಾಲ ನಡೆಯುವ ಟೂರ್ನಿಯಲ್ಲಿ ದಿನಕ್ಕೆ ಎರಡು ಪಂದ್ಯ ನಡೆಯಲಿವೆ. ಎರಡನೇ ಪಂದ್ಯವನ್ನು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಆರಂಭಿಸಲಾಗುವುದು. ಯಾವುದೇ ಆಟಗಾರನಿಗೆ ಕೊರೊನಾ ಸೋಂಕು ತಗುಲಿದಲ್ಲಿ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ತಂಡಗಳಿಗೆ ಅನುಮತಿ ನೀಡಲಾಗಿದೆ.

ಕ್ರೀಡಾಂಗಣಕ್ಕೆ ಬಂದು ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸಲು ಅವಕಾಶ ನೀಡುವ ಕುರಿತಾಗಿ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಯುಎಇ ಕ್ರಿಕೆಟ್ ಮಂಡಳಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...