
ದುಬೈ: ಕಳೆದ ಮೂರು ದಿನಗಳ ಹಿಂದೆಯಷ್ಟೇ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯಗಳಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ.
ಇದುವರೆಗೆ ಆಡಿದ 10 ಪಂದ್ಯಗಳಿಂದ 12 ಅಂಕ ಕಲೆಹಾಕಿರುವ ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಹಂತಕ್ಕೆ ಹತ್ತಿರವಾಗಲಿದೆ. ಆಡಿದ 10 ಪಂದ್ಯಗಳಲ್ಲಿ 8 ಅಂಕ ಗಳಿಸಿರುವ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತಲ್ಲಿ ವಿರಾಟ್ ಕೊಹ್ಲಿ ಬಳಗಕ್ಕೆ ಪ್ಲೇಆಫ್ ಹಂತದ ಹಾದಿ ಕಠಿಣವಾಗಲಿದೆ. ಮೊದಲ ಎರಡು ಪಂದ್ಯ ಸೋತು ಮೂರನೇ ಪಂದ್ಯವನ್ನು ಗೆದ್ದ ಆರ್ಸಿಬಿ ಇಂದಿನ ಪಂದ್ಯವನ್ನು ಕೂಡ ಗೆಲ್ಲುವ ತವಕದಲ್ಲಿದೆ. ಇದಕ್ಕಾಗಿ ಕೊಹ್ಲಿ ಬಳಗ ಕಾರ್ಯತಂತ್ರ ರೂಪಿಸಿದೆ.
24 ಪಂದ್ಯಗಳಲ್ಲಿ ಆರ್ಸಿಬಿ ಮತ್ತು ರಾಜಸ್ತಾನ ರಾಯಲ್ಸ್ ಮುಖಾಮುಖಿಯಾಗಿದ್ದು, ಬೆಂಗಳೂರು ತಂಡ 11 ಪಂದ್ಯಗಳಲ್ಲಿ, ರಾಜಸ್ಥಾನ 10 ಪಂದ್ಯಗಳಲ್ಲಿ ಜಯಗಳಿಸಿದೆ.