alex Certify BREAKING: ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್; ಸ್ಟಾರ್ ವೇಗಿ ಬೂಮ್ರಾ ಔಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್; ಸ್ಟಾರ್ ವೇಗಿ ಬೂಮ್ರಾ ಔಟ್

T20 ವಿಶ್ವಕಪ್‌ ನಿಂದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬೂಮ್ರಾ ಅಧಿಕೃತವಾಗಿ ಹೊರಗುಳಿದಿದ್ದಾರೆ, BCCI ಈ ಬಗ್ಗೆ ಮಾಹಿತಿ ನೀಡಿದೆ.

ಜಸ್ಪ್ರೀತ್ ಬುಮ್ರಾ ಅವರು ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಸೋಮವಾರ ಸಂಜೆ ತಿಳಿಸಿದೆ. ಈ ಬಗ್ಗೆ ಕ್ರಿಕೆಟ್ ಆಡಳಿತ ಮಂಡಳಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ ತಂಡಕ್ಕೆ ಸೇರಿಸಿಕೊಳ್ಳಲು ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರನ್ನು ಬಿಸಿಸಿಐ ವೈದ್ಯಕೀಯ ತಂಡ ತಳ್ಳಿಹಾಕಿದೆ. ವಿವರವಾದ ಮೌಲ್ಯಮಾಪನ ಮತ್ತು ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮಾಸ್ಟರ್‌ ಕಾರ್ಡ್ 3-ಪಂದ್ಯಗಳ T20I ಸರಣಿಯಿಂದ ಬೆನ್ನುನೋವಿನ ಕಾರಣ ಬುಮ್ರಾ ಆರಂಭದಲ್ಲಿ ಹೊರಗುಳಿದಿದ್ದರು. ಬಿಸಿಸಿಐ ಶೀಘ್ರದಲ್ಲೇ ಜಸ್ಪ್ರೀತ್ ಬುಮ್ರಾ ಅವರ ಬದಲಿ ಆಟಗಾರನನ್ನು ಹೆಸರಿಸಲಿದೆ ಎಂದು ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...