ಬೆಂಗಳೂರು: ಅಥ್ಲೀಟುಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಪೊಲೀಸ್ ಇಲಾಖೆಯಲ್ಲಿ ಶೇಕಡ 2 ರಷ್ಟು ಹುದ್ದೆಗಳಿಗೆ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ರಾಜ್ಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ. ಗೋವಿಂದರಾಜು ಈ ಬಗ್ಗೆ ಮಾಹಿತಿ ನೀಡಿದ್ದು ಕ್ರೀಡಾಪಟುಗಳಿಗೆ ನೇರ ನೇಮಕಾತಿಗೆ ಅವಕಾಶ ಕಲ್ಪಿಸಲು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಕಾಮನ್ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್, ಸಾರ್ಕ್ ಕ್ರೀಡಾಕೂಟ, ವಿಶ್ವ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ, ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗಳಿಸಿದವರಿಗೆ ಉದ್ಯೋಗ ನೀಡಲು ಮನವಿ ಮಾಡಲಾಗಿತ್ತು.
ಮೊದಲ ಹಂತದಲ್ಲಿ ಪೊಲೀಸ್ ಇಲಾಖೆಯ ಕಾನ್ ಸ್ಟೇಬಲ್ ಹುದ್ದೆಯಿಂದ ಅಧಿಕಾರಿ ಹುದ್ದೆವರೆಗೆ ನೇರ ನೇಮಕಾತಿ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ. ಇತರೆ ಇಲಾಖೆಗಳಲ್ಲಿಯೂ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ.