ಇಂದು ಐಪಿಎಲ್ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದ್ದು, ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ.
ಗುರುವಾರ ಜೋಸ್ ಬಟ್ಲರ್ ಅವರು ಕುಟುಂಬದೊಂದಿಗೆ ದುಬೈಗೆ ಬಂದಿದ್ದರು. ಜೋಸ್ ಬಟ್ಲರ್ ಕ್ವಾರಂಟೈನ್ ಆಗಿದ್ದು, ಈ ಕುರಿತು ಇನ್ಸ್ಟಾಗ್ರಾಮ್ ಲೈವ್ನಲ್ಲಿ ಹೇಳಿಕೊಂಡಿದ್ದಾರೆ.
ಕುಟುಂಬದ ಜೊತೆ ಇರಲು ಅನುಮತಿ ಕೊಟ್ಟಿದ್ದಕ್ಕೆ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿಗೆ ಧನ್ಯವಾದಗಳು. ನಾನು ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ಈ ಬಾರಿಯೂ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆರಂಭಿಕ ಆಟಗಾರನಾಗಿ ಮೈದಾನಕ್ಕಿಳಿಯಲು ಇಚ್ಚಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.