alex Certify ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ವೇಗದ ವೀರ ಶ್ರೀನಿವಾಸಗೌಡರಿಂದ ಮತ್ತೊಂದು ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ವೇಗದ ವೀರ ಶ್ರೀನಿವಾಸಗೌಡರಿಂದ ಮತ್ತೊಂದು ದಾಖಲೆ

ಉಡುಪಿ: ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ವೇಗದ ವೀರ ಶ್ರೀನಿವಾಸಗೌಡ ಮತ್ತೊಂದು ದಾಖಲೆ ಬರೆದಿದ್ದಾರೆ. ಕಕ್ಕೆಪದವುನಲ್ಲಿ ನಡೆದ ಕಂಬಳದಲ್ಲಿ 8.78 ಸೆಕೆಂಡ್ ನಲ್ಲಿ 100 ಮೀಟರ್ ಕ್ರಮಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಕಳೆದ ವಾರ ವೇಣೂರಿನಲ್ಲಿ ನಡೆದ ಕಂಬಳದಲ್ಲಿ 8.89 ಸೆಕೆಂಡ್ ಗಳಲ್ಲಿ 100 ಮೀಟರ್ ಕ್ರಮಿಸಿ ಅವರು ದಾಖಲೆ ಬರೆದಿದ್ದರು. ತಮ್ಮ ದಾಖಲೆಯನ್ನು ಭಾನುವಾರ ಹಿಂದಿಕ್ಕಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಮಿಜಾರು ಪ್ರಸಾದ್ ನಿಲಯದ ಶಕ್ತಿಪ್ರಸಾದ್ ಮಾಲೀಕರಾಗಿರುವ ಕೋಣಗಳನ್ನು ಓಡಿಸಿದ ಶ್ರೀನಿವಾಸಗೌಡ 8.78 ಸೆಕೆಂಡ್ ನಲ್ಲಿ 100 ಮೀಟರ್ ಕ್ರಮಿಸಿ ದಾಖಲೆ ಬರೆದಿದ್ದಾರೆ. ಈ ಬಾರಿಯ ಕಂಬಳದ ಸೀಸಸ್ ನಲ್ಲಿ ಅತಿ ಹೆಚ್ಚು 18 ಪದಕಗಳನ್ನು ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...