alex Certify ಭರ್ಜರಿ ಬ್ಯಾಟಿಂಗ್: 6 ಬಾಲ್ ಗೆ 6 ಸಿಕ್ಸರ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ ಕಿರನ್ ಪೊಲಾರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಬ್ಯಾಟಿಂಗ್: 6 ಬಾಲ್ ಗೆ 6 ಸಿಕ್ಸರ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ ಕಿರನ್ ಪೊಲಾರ್ಡ್

ಆಂಟಿಗುವಾ: ವೆಸ್ಟ್ ಇಂಡೀಸ್ ನಾಯಕ ಕಿರನ್ ಪೊಲಾರ್ಡ್ ಶ್ರೀಲಂಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ 6 ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದಾರೆ.

ಅಕಿಲಾ ಧನಂಜಯ ಅವರ ಒಂದೇ ಓವರ್ ನ ಆರು ಎಸೆತಗಳನ್ನು ಸಿಕ್ಸರ್ ಸಿಡಿಸುವ ಮೂಲಕ ಪೊಲಾರ್ಡ್ ದಾಖಲೆ ಬರೆದಿದ್ದಾರೆ. 11 ಎಸೆತಗಳಲ್ಲಿ 38 ರನ್ ಗಳಿಸಿದ ಅವರು ವಿಕೆಟ್ ಒಪ್ಪಿಸಿದ್ದಾರೆ.

ಭಾರತ ತಂಡದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದ್ದರು. 2007ರ ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಬೌಲಿಂಗ್ನಲ್ಲಿ ಆರು ಎಸೆತಗಳನ್ನು ಸಿಕ್ಸರ್ ಸಿಡಿಸಿದ್ದರು.

ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್ 2007ರ ಏಕದಿನ ವಿಶ್ವಕಪ್ ನಲ್ಲಿ ನೆದರ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಕೀರನ್ ಪೊಲಾರ್ಡ್ 6 ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸುವ ಮೂಲಕ ದಾಖಲೆ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...