ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ ಮೂರನೇ ಟೆಸ್ಟ್ ಪಂದ್ಯವನ್ನು ಆಡುವ ಮುನ್ನವೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಪ್ರಾಕ್ಟೀಸ್ ವೇಳೆ ಗಾಯಗೊಂಡಿರುವ ಕೆ.ಎಲ್. ರಾಹುಲ್ ಅವರನ್ನು ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಸದಿರಲು ಬಿಸಿಸಿಐ ತೀರ್ಮಾನಿಸಿದೆ.
ಟೀಮ್ ಇಂಡಿಯಾದ ಬ್ಯಾಟ್ಸ್ಮನ್ ಹಾಗೂ ವಿಕೆಟ್ ಕೀಪರ್ ಆಗಿರುವ ಕೆ.ಎಲ್. ರಾಹುಲ್ ಶನಿವಾರದಂದು ಪ್ರಾಕ್ಟೀಸ್ ಮಾಡುವ ವೇಳೆ ಎಡಗೈ ನೋವಿನಿಂದ ಬಳಲಿದ್ದರು. ಹೀಗಾಗಿ ಅವರು ಮುಂದಿನ ಎರಡು ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಟ್ವೀಟ್ ಮೂಲಕ ತಿಳಿಸಿದೆ.
ಈ ಹಿನ್ನಲೆಯಲ್ಲಿ ಕೆ.ಎಲ್. ರಾಹುಲ್ ಭಾರತಕ್ಕೆ ಮರಳಲಿದ್ದು ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ.