alex Certify ವಿಶ್ವನಾಥನ್ ಆನಂದ್ ನಂತರ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಮತ್ತೊಂದು ಪದಕ: ಭಾರತಕ್ಕೆ ಮೊದಲ ಬೆಳ್ಳಿ ಪದಕ ಗೆದ್ದ ಕೊನೇರು ಹಂಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವನಾಥನ್ ಆನಂದ್ ನಂತರ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಮತ್ತೊಂದು ಪದಕ: ಭಾರತಕ್ಕೆ ಮೊದಲ ಬೆಳ್ಳಿ ಪದಕ ಗೆದ್ದ ಕೊನೇರು ಹಂಪಿ

ನವದೆಹಲಿ: ಮಾಜಿ ವಿಶ್ವ ರ್ಯಾಪಿಡ್ ಚಾಂಪಿಯನ್ ಕೊನೇರು ಹಂಪಿ ಕಜಕಿಸ್ತಾನದ ಅಲ್ಮಾಟಿಯಲ್ಲಿ ನಡೆದ ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್‌ ಶಿಪ್‌ ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

ಹಂಪಿ ಅವರು 17ನೇ ಮತ್ತು ಅಂತಿಮ ಸುತ್ತಿನಲ್ಲಿ ಚೀನಾದ ಝೊಂಗಿ ಟಾನ್ ಅವರನ್ನು ಸೋಲಿಸಿ ಬೆಳ್ಳಿ ಗೆದ್ದರು. ನಾಲ್ಕನೇ ಶ್ರೇಯಾಂಕದ ಹಂಪಿ ಆಕರ್ಷಕ 12.5 ಪಾಯಿಂಟ್‌ಗಳನ್ನು ಗಳಿಸಿದರು, ಚಿನ್ನದ ಪದಕ ವಿಜೇತ ಕಜಕಸ್ತಾನದ ಬಿಬಿಸಾರ ಬಾಲಬಯೇವಾ ಅವರಿಗಿಂತ ಕೇವಲ ಅರ್ಧ ಪಾಯಿಂಟ್‌ ಹಿಂದೆ ಇದ್ದರು.

ವಿಶ್ವನಾಥನ್ ಆನಂದ್ ನಂತರ ವಿಶ್ವ ಬ್ಲಿಟ್ಜ್‌ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಹಂಪಿ ಪಾತ್ರರಾಗಿದ್ದಾರೆ.

ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಹಂಪಿ ಅವರನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅಭಿನಂದಿಸಿದ್ದು, ಗ್ರ್ಯಾಂಡ್‌ ಮಾಸ್ಟರ್‌ ನ ಸುಪ್ರಸಿದ್ಧ ಕ್ಯಾಪ್‌ ನಲ್ಲಿ ಇದು ಮತ್ತೊಂದು ಗರಿ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...