alex Certify ಅಪಘಾತದಲ್ಲಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಮೂಳೆ ಮುರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಮೂಳೆ ಮುರಿತ

ಮೆಲ್ಬರ್ನ್: ಆಸ್ಟ್ರೇಲಿಯಾದ ಲೆಜೆಂಡರಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಅಪಘಾತದಲ್ಲಿ ಗಾಯಗೊಂಡಿದ್ದು, ಮೂಳೆ ಮುರಿದಿದೆ.

52 ವರ್ಷದ ಶೇನ್ ವಾರ್ನ್ ಭಾನುವಾರ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮೂಳೆ ಮುರಿತಕ್ಕೊಳಗಾದ ಅವರು ಚಿಕಿತ್ಸೆ ಪಡೆದುಕೊಂಡಿದ್ದು, ಘಟನೆಯಿಂದ ಆಘಾತಕ್ಕೆ ಒಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ.

ತಮ್ಮ ಪುತ್ರ ಜಾಕ್ಸನ್ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಬಿದ್ದು ಪೆಟ್ಟಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಗಾಯಗಳಿಂದ ತುಂಬಾ ನೊಂದಿರುವುದಾಗಿ ಅವರು ತಿಳಿಸಿದ್ದಾರೆ. ಡಿ. 8 ಗಾಬಾದಲ್ಲಿ ಆರಂಭವಾಗುವ ಆಶಸ್ ಸರಣಿಯ ಮೊದಲ ಪಂದ್ಯದಲ್ಲಿ ವೀಕ್ಷಕ ವಿವರಣೆಗಾರರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...