
ಗೃಹ ಮಂತ್ರಿ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಭಾರತ ರತ್ನ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕರು ದೇಶದ ವಿಚಾರದಲ್ಲಿ ವಿದೇಶದವರ ಅಭಿಪ್ರಾಯದ ಅಗತ್ಯವಿಲ್ಲ ಎಂಬರ್ಥದಲ್ಲಿ ಟ್ವೀಟ್ ಮಾಡುವ ಮೂಲಕ ರಿಹನ್ನಾಗೆ ಟಾಂಗ್ ನೀಡಿದ್ದಾರೆ.
ಇದೀಗ ಈ ವಿಚಾರವಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಟ್ವೀಟಾಯಿಸಿದ್ದಾರೆ. ದೇಶದಲ್ಲಿ ಭಿನ್ನಾಭಿಪ್ರಾಯ ಮೂಡಿರುವ ಈ ಸಂದರ್ಭದಲ್ಲೂ ನಾವೆಲ್ಲ ಒಗ್ಗಟ್ಟಾಗಿ ಇರೋಣ. ರೈತರು ನಮ್ಮ ದೇಶದ ಅವಿಭಾಜ್ಯ ಅಂಗವಾಗಿದ್ದಾರೆ. ಅಲ್ಲದೇ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಕ್ಕು ಮತ್ತೆ ದೇಶದಲ್ಲಿ ಶಾಂತಿ ನೆಲೆಸಲಿದೆ ಎಂಬ ನಂಬಿಕೆ ನನಗಿದೆ ಎಂದು ಬರೆದುಕೊಂಡಿದ್ದಾರೆ.
ಇತ್ತ ಟೀಂ ಇಂಡಿಯಾ ಉಪನಾಯಕ ಅಜಿಂಕ್ಯ ರಹಾನೆ ಕೂಡ ಈ ವಿಚಾರವಾಗಿ ಟ್ವೀಟ್ ಮಾಡಿ, ನಾವೆಲ್ಲ ಒಗ್ಗಟ್ಟಾಗಿ ನಿಂತರೆ ಯಾವುದೇ ಸಮಸ್ಯೆ ಪರಿಹಾರವಾಗಲ್ಲ ಎಂಬ ವಿಷಯವೇ ನಮ್ಮ ಮುಂದೆ ಇರೋದಿಲ್ಲ. ಹೀಗಾಗಿ ನಾವೆಲ್ಲ ಒಂದಾಗಿ ಇರೋಣ. ಆಂತರಿಕ ಸಮಸ್ಯೆಗಳನ್ನ ಒಂದಾಗಿ ಪರಿಹರಿಸೋಣ ಎಂದು ಟ್ವೀಟಾಯಿಸಿದ್ದಾರೆ.