alex Certify BIG BREAKING: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಭಾರತ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಭಾರತ ಬ್ಯಾಟಿಂಗ್

ದುಬೈ: ಭಾರತ -ಪಾಕಿಸ್ತಾನ ತಂಡಗಳ ವಿಶ್ವಕಪ್ ಟಿ20 ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ದುಬೈ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದೆ.

ಟಿ20 ವಿಶ್ವಕಪ್ ನ ಹೈ ವೋಲ್ಟೇಜ್ ಮ್ಯಾಚ್ ಎಂದೇ ಹೇಳಲಾಗಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇಂದು ಗೆಲುವಿಗಾಗಿ ಕಾದಾಟ ನಡೆಯಲಿದೆ.

5 ವಿಶ್ವಕಪ್ ಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಎಲ್ಲಾ ಪಂದ್ಯಗಳಲ್ಲಿ ಭಾರತ ತಂಡ ಜಯಗಳಿಸಿದೆ. ಒಟ್ಟು 8 ಸಲ ಭಾರತ-ಪಾಕ್ ತಂಡ ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 7 ಬಾರಿ ಮತ್ತು ಪಾಕಿಸ್ತಾನ 1 ಬಾರಿ ಜಯಗಳಿಸಿದೆ. ಪಂದ್ಯದ ಬಗ್ಗೆ ಕುತೂಹಲ ಭಾರಿ ಹೆಚ್ಚಿದೆ.

ಭಾರತ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಪಾಕಿಸ್ತಾನ: ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಮ್, ಶಾದಾಬ್ ಖಾನ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...