ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪುತ್ರ ಜಯ್ ಷಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ) ಅಧ್ಯಕ್ಷರಾಗಿ ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.
ಬಿಸಿಸಿಐ ಡೈರೆಕ್ಟರ್ ಗಳಲ್ಲಿ ಒಬ್ಬರಾಗಿರುವ ಜಯ್ ಷಾ ಶನಿವಾರ ನಡೆದ ಎಸಿಸಿ ಸಾಮಾನ್ಯ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಸಾಲ ಮನ್ನಾ: ರೈತರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಾಧ್ಯತೆ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದನ್ನು ಕಟುವಾಗಿ ಟೀಕಿಸಿದ್ದಾರೆ. ಇದು ಬಿಜೆಪಿಯ ಅರ್ಹತೆಯನ್ನು ತೋರಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಆಯ್ಕೆ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.