alex Certify IPL: ಭರ್ಜರಿ ಗೆಲುವಿನೊಂದಿಗೆ ಮುಂಬೈ ಫೈನಲ್ ಗೆ, ಇಂದು RCB –SRH ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ಭರ್ಜರಿ ಗೆಲುವಿನೊಂದಿಗೆ ಮುಂಬೈ ಫೈನಲ್ ಗೆ, ಇಂದು RCB –SRH ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ

ದುಬೈ: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 57 ರನ್ ಗಳ ಭರ್ಜರಿ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್ ಐಪಿಎಲ್ ನಲ್ಲಿ ಆರನೇ ಸಲ ಫೈನಲ್ ಪ್ರವೇಶಿಸಿದಂತಾಗಿದೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ 20 ಓವರುಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿದೆ. ಸೂರ್ಯಕುಮಾರ್ 51, ಇಶಾನ್ ಕಿಶನ್ ಅಜೇಯ 55, ಹಾರ್ದಿಕ್ ಪಾಂಡ್ಯ ಅಜೇಯ 37 ರನ್ ಗಳಿಸಿದ್ದಾರೆ.

ಇನ್ನು ಗೆಲುವಿನ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ರನ್ ಖಾತೆ ತೆರೆಯುವ ಮೊದಲೇ ಮೂರು ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅಂತಿಮವಾಗಿ 20 ಓವರುಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿದೆ. ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದು ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಬುಧಾಬಿಯ ಶೇಖ್ ಝಾಯೇದ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದವರು ಕ್ವಾಲಿಫೈಯರ್ 2 ರಲ್ಲಿ ಆಡುವ ಅರ್ಹತೆ ಪಡೆಯಲಿದ್ದು, ಸೋತ ತಂಡ ಹೊರ ಬೀಳಲಿದೆ. ಕ್ವಾಲಿಫೈಯರ್ 2 ರಲ್ಲಿ ಜಯಗಳಿಸಿದ ತಂಡ ಫೈನಲ್ ಪ್ರವೇಶಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...