
ನವದೆಹಲಿ: ಫ್ಲೈಯಿಂಗ್ ಸಿಖ್ ಖ್ಯಾತಿಯ ಮಾಜಿ ಅಥ್ಲೀಟ್ ಮಿಲ್ಖಾಸಿಂಗ್(91) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಚಂಡಿಗಡದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೇ 19 ರಂದು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮೇ 24ರಂದು ಮೊಹಾಲಿ ಆಸ್ಪತ್ರೆಗೆ ದಾಖಲಿಸಿದ್ದು, ಕೊರೋನಾ ಬೆನ್ನಲ್ಲೆ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು. ಜೂನ್ 13 ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದು, ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.