
ನವದೆಹಲಿ: ಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ ಮೀರಾಬಾಯಿ ಚಾನುಗೆ ಮಣಿಪುರ ಸರ್ಕಾರದಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ನೀಡಲಾಗಿದೆ.
ಟೋಕಿಯೊ ಒಲಿಂಪಿಕ್ಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ ನ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆಲ್ಲುವ ಮೂಲಕ ಮಿರಾಬಾಯಿ ಚಾನು ಸಾಧನೆ ಮಾಡಿದ್ದಾರೆ. ಕ್ರೀಡಾ ಕೋಟಾದ ಮೂಲಕ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲು ಮಣಿಪುರ ಸರ್ಕಾರ ನಿರ್ಧರಿಸಿದೆ.