alex Certify ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ನಾಮನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ನಾಮನಿರ್ದೇಶನ

ನವದೆಹಲಿ: ಕಳೆದ ತಿಂಗಳು ನಡೆದ ಏಕದಿನ ವಿಶ್ವ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೊಹಮ್ಮದ್ ಶಮಿ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಏಕದಿನ ವಿಶ್ವಕಪ್ ನಲ್ಲಿ ಶಮಿ 7 ಪಂದ್ಯಗಳನ್ನಷ್ಟೇ ಆಡಿದ್ದು, 24 ವಿಕೆಟ್ ಕಬ್ಬಳಿಸಿದ್ದರು. ಭಾರತ ತಂಡ ಫೈನಲ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿರುವ ಅರ್ಜುನ ಪ್ರಶಸ್ತಿಗೆ ಮೊಹಮ್ಮದ್ ಶಮಿ ಅವರ ಹೆಸರನ್ನು ಬಿಸಿಸಿಐ ಶಿಫಾರಸು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...