ದುಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್. ಧೋನಿ ವಿಶ್ವ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 300 ಪಂದ್ಯಗಳಿಗೆ ನಾಯಕತ್ವ ವಹಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ
ಐಪಿಎಲ್ 14 ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ 300 ಪಂದ್ಯಗಳಲ್ಲಿ ನಾಯಕನಾದ ಹೆಗ್ಗಳಿಕೆಗೆ ಪಾತ್ರರಾಗುವುದರೊಂದಿಗೆ ವಿಶ್ವ ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ನ ಡರೆನ್ ಸ್ವಾಮಿ 208 ಟಿ20 ಪಂದ್ಯಗಳಲ್ಲಿ ನಾಯಕರಾಗಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ 12 ಆವೃತ್ತಿಗಳಲ್ಲಿ ತಂಡವನ್ನು ಮುನ್ನಡೆಸಿದ ಧೋನಿ 9 ನೇ ಫೈನಲ್ ಆಡಿದ್ದಾರೆ. ಎರಡು ಆವೃತ್ತಿಗಳಲ್ಲಿ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಿದ್ದ ಅವರು 1 ವರ್ಷ ನಾಯಕರಾಗಿದ್ದರು.
6 ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಧೋನಿ ಭಾರತ ತಂಡದ ನಾಯಕತ್ವ ವಹಿಸಿದ್ದರು. ಧೋನಿ ನಾಯಕತ್ವದಲ್ಲಿ 2017 ರಲ್ಲಿ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿತ್ತು.
ನಾಯಕನಾಗಿ 8ನೇ ಟಿ20 ಟ್ರೋಫಿ ಗೆದ್ದ ಧೋನಿ ಈ ಸಾಧನೆ ಮಾಡಿದ ಮೊದಲಿಗರಾಗಿದ್ದಾರೆ. 4 ಐಪಿಎಲ್, 3 ಚಾಂಪಿಯನ್ಸ್ ಲೀಗ್, 1 ವಿಶ್ವಕಪ್ ಮತ್ತು 1 ಏಷ್ಯಾಕಪ್ ಟಿ20 ಟ್ರೋಫಿ ಗೆದ್ದಿದ್ದಾರೆ.