
ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ವಿವಿಧ ಚಟುವಟಿಕೆಗಳ ಮೂಲಕ ರಜೆ ದಿನಗಳನ್ನು ಕಳೆಯುತ್ತಿದ್ದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಭಾರತಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕ ಧೋನಿ, ಐಪಿಎಲ್ ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.