ಭಾರತದಲ್ಲಿ ಕೊರೊನಾ ಎರಡನೇ ಅಲೆ ಹರಡಿದ ಕಾರಣ ಐಪಿಎಲ್ ಋತುವನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ. ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಕ್ರಿಕೆಟಿಗರು ಹೆಚ್ಚಿನ ಸಮಯವನ್ನು ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸದ್ಯ ರಾಂಚಿಯಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿಲ್ಲ. ಆದರೆ ಅವರ ಪತ್ನಿ ಸಾಕ್ಷಿ ಇನ್ಸ್ಟಾಗ್ರಾಮ್ನಲ್ಲಿ ಸಕ್ರಿಯವಾಗಿದ್ದಾರೆ. ಸಾಕ್ಷಿ, ಧೋನಿಗೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ತಿದ್ದಾರೆ. ಈಗ ಸಾಕ್ಷಿ ಇನ್ನೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದ್ರಲ್ಲಿ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ.
ವೀಡಿಯೊದಲ್ಲಿ ಧೋನಿ, ನಾಯಿಗೆ ಚೆಂಡು ಎಸೆಯುತ್ತಿದ್ದಾರೆ. ಧೋನಿ ಜೊತೆ ಮಗಳು ಜೀವಾ ಕೂಡ ಕಾಣಿಸಿಕೊಂಡಿದ್ದಾಳೆ. ಧೋನಿ, ಚೆಂಡು ಎಸೆಯುತ್ತಿದ್ದಂತೆ ನಾಯಿ ವೇಗವಾಗಿ ಓಡುತ್ತದೆ. ಧೋನಿ ಈ ವಿಡಿಯೋಕ್ಕೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ತಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಟ್ರೋಫಿಯನ್ನು ಮೂರು ಬಾರಿ ಗೆದ್ದುಕೊಂಡಿದೆ. ಈ ಬಾರಿಯೂ ಧೋನಿ ಟೀಂ ಉತ್ತಮ ಪ್ರದರ್ಶನ ನೀಡಿತ್ತು. ಆದ್ರೆ ಕೊರೊನಾ ಹಿನ್ನಲೆಯಲ್ಲಿ ಐಪಿಎಲ್ ಪಂದ್ಯವನ್ನು ರದ್ದುಪಡಿಸಲಾಗಿದೆ.