ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಐಪಿಎಲ್ ಆರಂಭಕ್ಕೆ ದಿನ ಸಮೀಪಿಸುತ್ತಿರುವಂತೆಯೇ ಅನೇಕ ಬೆಳವಣಿಗೆ ನಡೆದಿವೆ. ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ, ರೋಹಿತ್ ಶರ್ಮಾ ಒಂದೇ ತಂಡದಲ್ಲಿ ಆಡುವಂತಿದ್ದರೆ ಹೇಗಿರುತ್ತೆ?
ಎಬಿ ಡಿವಿಲಿಯರ್ಸ್ ತಮ್ಮ ಸಾರ್ವಕಾಲಿಕ ಐಪಿಎಲ್ ಇಲೆವೆನ್ ಆಯ್ಕೆ ಮಾಡಿದ್ದು, ಅದರಲ್ಲಿ ನಿರೀಕ್ಷೆಯಂತೆಯೇ ಭಾರತದ ಕ್ರಿಕೆಟ್ ಆಟಗಾರರೇ ಪ್ರಾಬಲ್ಯ ಹೊಂದಿದ್ದಾರೆ. ದಕ್ಷಿಣ ಆಫ್ರಿಕದ ಆಟಗಾರ ಎಬಿ ಡಿವಿಲಿಯರ್ಸ್ ತಮ್ಮ ಕನಸಿನ ಐಪಿಎಲ್ ತಂಡದಲ್ಲಿ ತಮ್ಮ ಸ್ನೇಹಿತ ಮತ್ತು ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಆಯ್ಕೆ ಮಾಡಿದ್ದಾರೆ. ಅದೇ ರೀತಿ, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದ್ದು, ವೀರೇಂದ್ರ ಸೆಹವಾಗ್ ಅವರನ್ನು ಕೂಡ ಆಯ್ಕೆ ಮಾಡಿದ್ದಾರೆ.
ಎಬಿ ಡಿವಿಲಿಯರ್ಸ್ ಐಪಿಎಲ್ ತಂಡದಲ್ಲಿ ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೊದಲ ಮೂರು ಸ್ಥಾನಗಳಲ್ಲಿ ಇದ್ದಾರೆ. 4ನೇ ಸ್ಥಾನದಲ್ಲಿ ಸ್ಟೀವ್ ಸ್ಮಿತ್, ಕೇನ್ ವಿಲಿಯಮ್ಸನ್ ಅಥವಾ ನಾನೇ ಇರಬಹುದು ಎಂದು ಅವರು ಕ್ರಿಕೆಟ್ ಬುಜ್ ಸಂವಾದದಲ್ಲಿ ಹೇಳಿಕೊಂಡಿದ್ದಾರೆ. ರಾಜಸ್ತಾನ ರಾಯಲ್ಸ್ ತಾರೆ ಬೆನ್ ಸ್ಟೋಕ್ಸ್ ಅವರನ್ನು 5ನೇ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. 6ನೇ ಸ್ಥಾನಕ್ಕೆ ಎಂಎಸ್ ಧೋನಿ ಹಾಗೂ ನಂತರದಲ್ಲಿ ಉಳಿದ ತಂಡವನ್ನು ಆಯ್ಕೆ ಮಾಡಿದ್ದಾರೆ.