ದುಬೈ: ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗುವ ಸಾಧ್ಯತೆ ಇದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲ ಸದಸ್ಯರಿಗೆ ಕೊರೊನಾ ಸೋಂಕು ತಗಲುವುದರಿಂದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲಿಗೆ ಆರ್ಸಿಬಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರು ಸೇರಿ 13 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಕಾರಣದಿಂದ ಚೆನ್ನೈ ತಂಡದ ಬದಲು ಮುಂಬೈ ಇಂಡಿಯನ್ಸ್ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಉದ್ಘಾಟನೆ ಪಂದ್ಯದಲ್ಲಿ ಮುಖಾಮುಖಿಯಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ.