ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿದೆ. ನಾಲ್ಕನೇ ಮತ್ತು ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಂದು ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಉಭಯ ತಂಡಗಳು ಒಂದೊಂದು ಪಂದ್ಯದಲ್ಲಿ ಗೆಲುವು ಸಾಧಿಸಿ ಒಂದೊಂದು ಅಂಕ ಗಳಿಸಿದ್ದವು. ಕೊನೆ ಪಂದ್ಯದಲ್ಲಿ ಜಯದ ನಗೆ ಬೀರಿದ ಭಾರತ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಬ್ರಿಸ್ಬೇನ್ ನಲ್ಲಿ ಆಸ್ಟ್ರೇಲಿಯಾ 33 ವರ್ಷಗಳಿಂದ ಸೋಲು ಕಂಡಿರಲಿಲ್ಲ. 33 ವರ್ಷಗಳ ನಂತ್ರ ಟೀಂ ಇಂಡಿಯಾ ಬ್ರಿಸ್ಬೇನ್ ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 369 ರನ್ ಗಳಿಸಿತ್ತು. ಗುರಿ ಬೆನ್ನು ಹತ್ತಿದ ಟೀಂ ಇಂಡಿಯಾ 336 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 294 ರನ್ ಗಳಿಸಿತ್ತು. ಒಟ್ಟು 328 ರನ್ ಗಳ ಗುರಿ ಬೆನ್ನು ಹತ್ತದ ಭಾರತ ಗೆಲುವು ಸಾಧಿಸಿದೆ.
ಶುಭಮನ್ ಗಿಲ್, ಚೇತೇಶ್ವರ ಪೂಜಾರ ನಂತರ ರಿಷಭ್ ಪಂತ್ ಅವರ ಅತ್ಯುತ್ತಮ ಬ್ಯಾಟಿಂಗ್ ಕಾರಣ ಭಾರತ ನಾಲ್ಕನೇ ಟೆಸ್ಟ್ ಗೆದ್ದಿದೆ. ಗಿಲ್ 91, ಪೂಜಾರಾ 56 ಮತ್ತು ಪಂತ್ ಅಜೇಯ 89 ರನ್ ಗಳಿಸಿದರು.