ಕಠ್ಮಂಡು: ಅತ್ಯಾಚಾರ ಪ್ರಕರಣದಲ್ಲಿ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಸಂದೀಪ್ ಲಾಮಿಚಾನೆ ಅವರನ್ನು ಡಿಸೆಂಬರ್ 2023 ರಲ್ಲಿ ಅಪರಾಧಿ ಎಂದು ಘೋಷಿಸಿದ ಅತ್ಯಾಚಾರ ಪ್ರಕರಣಕ್ಕೆ ನೇಪಾಳ ನ್ಯಾಯಾಲಯವು ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಕಠ್ಮಂಡು ಜಿಲ್ಲಾ ನ್ಯಾಯಾಲಯವು 2022ರ ಆಗಸ್ಟ್ ನಲ್ಲಿ ಕಠ್ಮಂಡುವಿನ ಹೋಟೆಲ್‌ವೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ತಪ್ಪಿತಸ್ಥನೆಂದು ತೀರ್ಪು ನೀಡಿತು. ಲಾಮಿಚಾನೆಯನ್ನು ಜನವರಿ 2023ರಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ ಹಲವಾರು ಕಾನೂನು ಪ್ರಕ್ರಿಯೆಗಳ ನಂತರ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಆರೋಪಗಳ ಹೊರತಾಗಿಯೂ, ಲಮಿಚಾನೆ ಅವರು ಜಾಮೀನಿನ ಮೇಲೆ ತಮ್ಮ ದೇಶಕ್ಕಾಗಿ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಾ ಕ್ರಿಕೆಟ್ ಆಡುವುದನ್ನು ಮುಂದುವರೆಸಿದ್ದರು. ನವೆಂಬರ್‌ನಲ್ಲಿ ನಡೆದ ಟಿ20 ಏಷ್ಯಾ ಫೈನಲ್ಸ್‌ನಲ್ಲಿ ಒಮಾನ್ ವಿರುದ್ಧ ನೇಪಾಳ ಪರ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ನ್ಯಾಯಾಲಯದ ನಿರ್ಧಾರವು ಇದೀಗ ಅವರ ಕ್ರಿಕೆಟ್ ವೃತ್ತಿಜೀವನವನ್ನು ಸ್ಥಗಿತಗೊಳಿಸಿದೆ, ಅವರು ಜೈಲು ಶಿಕ್ಷೆ ಎದುರಿಸುತ್ತಿದ್ದಾರೆ.