
ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ನೆದರ್ಲೆಂಡ್ಸ್ ಮಣಿಸಿ ಅಚ್ಚರಿ ಮೂಡಿಸಿದೆ.
ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಕಾಟ್ ಎಡ್ವರ್ಡ್ಸ್ ಅಜೇಯ 78 ರನ್ ಗಳಿಸಿದ್ದಾರೆ. ಈ ಮೂಲಕ ಅವರು ಭಾರತದ ಕಪಿಲ್ ದೇವ್ ದಾಖಲೆ ಮುರಿದಿದ್ದಾರೆ.
ಎಡ್ವರ್ಡ್ಸ್ ಅವರ 78* ವಿಶ್ವಕಪ್ ಇತಿಹಾಸದಲ್ಲಿ ನಂ. 7 ಅಥವಾ ಅದಕ್ಕಿಂತ ಕಡಿಮೆ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ನಾಯಕನ ಗರಿಷ್ಠ ಸ್ಕೋರ್ ಆಗಿದೆ. 1987 ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 72* ರನ್ ಗಳಿಸಿದ ಭಾರತದ ಮಾಜಿ ನಾಯಕ ಕಪಿಲ್ ದೇವ್ ಅವರ 36 ವರ್ಷಗಳ ಹಳೆಯ ದಾಖಲೆಯನ್ನು ಡಚ್ ನಾಯಕ ಮೀರಿಸಿದ್ದಾರೆ.
ವಿಶ್ವಕಪ್‌ನಲ್ಲಿ ನಂ.7 ಅಥವಾ ಅದಕ್ಕಿಂತ ಕಡಿಮೆ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ನಾಯಕರ ಗರಿಷ್ಠ ಸ್ಕೋರ್
78* – ಸ್ಕಾಟ್ ಎಡ್ವರ್ಡ್ಸ್ (NED vs SA), 2023
72* – ಕಪಿಲ್ ದೇವ್ (IND vs NZ), 1987
72* – ಹೀತ್ ಸ್ಟ್ರೀಕ್ (ZIM vs NZ), 2003
68 – ದಸುನ್ ಶನಕ (SL vs SA), 2023