ದುಬೈ: ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ತನ್ನ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿದೆ.
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿತು. ಕೆ.ಎಲ್. ರಾಹುಲ್ 18, ರೋಹಿತ್ ಶರ್ಮಾ 14, ವಿರಾಟ್ ಕೊಹ್ಲಿ 9 ರಿಷಬ್ ಪಂತ್ 12, ಹಾರ್ದಿಕ್ ಪಾಂಡ್ಯ 23, ರವೀಂದ್ರ ಜಡೇಜ ಅಜೇಯ 26 ರನ್ ಗಳಿಸಿದರು. ನ್ಯೂಜಿಲೆಂಡ್ ಪರ ಟ್ರೆಂಟ್ ಬೌಲ್ಟ್ 3, ಟಿಮ್ ಸೌಥಿ 1, ಆಡಂ ಮಿಲ್ನೆ 1, ಇಶ್ ಸೋಧಿ 2 ವಿಕೆಟ್ ಪಡೆದರು.
ಗೆಲುವಿನ ಗುರಿ ಬೆನ್ನತ್ತಿದ್ದ ನ್ಯೂಜಿಲೆಂಡ್ 14.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 111 ರನ್ ಗಳಿಸಿ ಗೆಲವು ಕಂಡಿದೆ. ಮಾರ್ಟಿನ್ ಗಪ್ಟಿಲ್ 20, ಡರಿಲ್ ಮಿಂಚೆಲ್ 49, ಕೇನ್ ವಿಲಿಯಮ್ಸನ್ ಅಜೇಯ 33, ಡೆವೊನ್ ಕಾನ್ನೆ ಅಜೇಯ 2 ರನ್ ಗಳಿಸಿದರು.
ವಿರಾಟ್ ಕೊಹ್ಲಿ ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕ ಬದಲಾವಣೆ ಮಾಡಿ ಕೈಸುಟ್ಟುಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಪಾಕ್ ಎದುರು ಸೋಲು ಕಂಡಿದ್ದ ಭಾರತ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮುಗ್ಗರಿಸಿದೆ.