alex Certify IPL ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಈ ಆಟಗಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಈ ಆಟಗಾರರು

ಕೊರೊನಾ ಕಾರಣಕ್ಕೆ ಐಪಿಎಲ್ ನ 14 ನೇ  ಋತುವಿನ ಪಂದ್ಯಗಳನ್ನು ಮುಂದೂಡಲಾಗಿದೆ. 29 ಪಂದ್ಯಗಳ ನಂತರ ಪಂದ್ಯವನ್ನು ಮುಂದೂಡಲಾಗಿದೆ. ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ಬಿಸಿಸಿಐ ಯೋಜಿಸುತ್ತಿದೆ. ಆದರೆ ಉಳಿದ ಐಪಿಎಲ್ ಪಂದ್ಯಗಳನ್ನು ಸೆಪ್ಟೆಂಬರ್‌ನಲ್ಲಿ ಆಯೋಜಿಸುವುದು ಬಿಸಿಸಿಐಗೆ ಸುಲಭವಲ್ಲ. ಐಪಿಎಲ್ 2021 ರ ಉಳಿದ ಪಂದ್ಯಗಳನ್ನಾಡಲು ಇಂಗ್ಲೆಂಡ್ ಕ್ರಿಕೆಟಿಗರು ಲಭ್ಯವಿರುವುದಿಲ್ಲ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ. ನ್ಯೂಜಿಲೆಂಡ್‌ನ ಆಟಗಾರರು ಸಹ ತಂಡಕ್ಕೆ ಲಭ್ಯರಾಗುವ ಸಾಧ್ಯತೆ ಕಡಿಮೆಯಿದೆ.

ಸೆಪ್ಟೆಂಬರ್ ನಲ್ಲಿ ಯುಎಇಯಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಮಧ್ಯೆ ಪಂದ್ಯ ನಡೆಯಲಿದೆ. ಈ ಸರಣಿ ಕಾರಣದಿಂದಾಗಿ ನ್ಯೂಜಿಲ್ಯಾಂಡ್ ನ ಆಟಗಾರರು ಐಪಿಎಲ್ ಗೆ ಅಲಭ್ಯರಾಗಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್, ಪಾಕಿಸ್ತಾನ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಪಂದ್ಯವನ್ನು ಮುಂದೂಡಲು ಸಾಧ್ಯವಿಲ್ಲ.

ಇಂಗ್ಲೆಂಡ್ ತಂಡ ಸೆಪ್ಟೆಂಬರ್ ನಲ್ಲಿ ಬಾಂಗ್ಲಾ ವಿರುದ್ಧ ನಡೆಯುವ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಬಾಂಗ್ಲಾದೇಶ ವಿರುದ್ಧ 3 ಏಕದಿನ ಮತ್ತು 3 ಟಿ 20 ಪಂದ್ಯ ನಡೆಯಲಿದೆ. ಐಪಿಎಲ್ 2021 ರ ಎರಡನೇ ಹಂತಕ್ಕೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್‌ನ ಆಟಗಾರರಲ್ಲದೆ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಆಟಗಾರರು ಸಹ ಲಭ್ಯವಿರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...