ಅಬುಧಾಬಿ: ಆಫ್ಘಾನಿಸ್ತಾನ ವಿರುದ್ಧ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ಸೆಮಿಫೈನಲ್ ಪ್ರವೇಶಿಸಿದ್ದು, ಭಾರತದ ವಿಶ್ವಕಪ್ ಕನಸು ಭಗ್ನವಾಗಿದೆ.
ಭರ್ಜರಿ ಗೆಲುವಿನೊಂದಿಗೆ ನ್ಯೂಜಿಲೆಂಡ್ ಸೆಮಿಫೈನಲ್ ಪ್ರವೇಶಿಸಿದೆ. ಟಿ-20 ವಿಶ್ವಕಪ್ ಟೂರ್ನಿಯಿಂದ ಭಾರತ ಹೊರಬಿದ್ದಿದೆ. ಆಫ್ಘಾನಿಸ್ತಾನದ ವಿರುದ್ಧ ಭರ್ಜರಿ ಜಯ ಗಳಿಸಿದ ನ್ಯೂಜಿಲೆಂಡ್ ಸೆಮಿಫೈನಲ್ ಪ್ರವೇಶಿಸಿದೆ.
ಮೊದಲೆರಡು ಪಂದ್ಯಗಳನ್ನು ಸೋತಿದ್ದ ಟೀಮ್ ಇಂಡಿಯಾ, ನಂತರದ ಎರಡು ಪಂದ್ಯಗಳನ್ನು ಜಯಿಸಿದೆ. ಸೋಮವಾರ ನಮೀಬಿಯಾ ತಂಡವನ್ನು ಎದುರಿಸಲಿದೆ.
ಗ್ರೂಪ್ ಎರಡರ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಆಫ್ಘಾನಿಸ್ಥಾನ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಇದರೊಂದಿಗೆ ಗ್ರೂಪ್ 2 ರಲ್ಲಿ ಸೆಮಿಫೈನಲ್ ಪ್ರವೇಶಿಸಿದ ಎರಡನೇ ತಂಡವಾಗಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಅಫ್ಘಾನಿಸ್ಥಾನ ಗೆಲುವು ಕಂಡಿದ್ದರೆ ಭಾರತಕ್ಕೆ(ನ್ಯೂಜಿಲೆಂಡ್, ಆಫ್ಘಾನಿಸ್ತಾನ ಕ್ಕಿಂತ ಹೆಚ್ಚಿನ ನೆಟ್ ರನ್ ರನ್ ರೇಟ್ ನಲ್ಲಿ) ಸೆಮಿಫೈನಲ್ ತಲುಪುವ ಸಣ್ಣದೊಂದು ಅವಕಾಶವಿತ್ತು. ಅದೂ ನಾಳಿನ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಗೆದ್ದರೆ. ಆದರೆ, ಈಗ ಗೆದ್ದರೂ, ಸೋತರೂ ಟೂರ್ನಿಯಿಂದ ಹೊರ ಬಿದ್ದಿದೆ.
2019 ರಲ್ಲಿ ನಡೆದ ಏಕದಿನ ವರ್ಲ್ಡ್ ಕಪ್ ನಲ್ಲಿ ಸೆಮಿಫೈನಲ್ ನಲ್ಲಿ ಭಾರತ ತಂಡವನ್ನು ನ್ಯೂಜಿಲೆಂಡ್ ಮಣಿಸಿತ್ತು.
2021 ರ WTC ಫೈನಲ್ ನಲ್ಲಿ ನ್ಯೂಜಿಲೆಂಡ್ ಭಾರತ ತಂಡವನ್ನು ಸೋಲಿಸಿತ್ತು.
2021 ರ ಟಿ20 ವರ್ಲ್ಡ್ ಕಪ್ ನಲ್ಲಿ ನ್ಯೂಜಿಲೆಂಡ್ ತಂಡ ಗುಂಪು ಹಂತದಲ್ಲೇ ಭಾರತ ತಂಡವನ್ನು ಹೊರದಬ್ಬಿದೆ.
ಯಾವುದೇ ಸ್ವರೂಪದ ಕ್ರಿಕೆಟ್ ಇರಲಿ, ನ್ಯೂಜಿಲೆಂಡ್ ತಂಡ ಐಸಿಸಿ ಟೂರ್ನಿಗಳಲ್ಲಿ ಭಾರತ ತಂಡಕ್ಕೆ ಬಹುವಾಗಿ ಕಾಡಿದೆ ಎಂಬ ಸಂದೇಶಗಳು ಜಾಲತಾಣಗಳಲ್ಲಿ ಹರಿದಾಡಿವೆ.