alex Certify ಒಲಿಂಪಿಕ್ಸ್ ಚಿನ್ನದ ಪದಕ ವಿಜೇತನಿಂದ ನಾಚಿಕೆಗೇಡಿನ ಕೃತ್ಯ, ತರಬೇತುದಾರನ ಪುತ್ರಿಯೊಂದಿಗೆ ಲೈಂಗಿಕ ಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತನಿಂದ ನಾಚಿಕೆಗೇಡಿನ ಕೃತ್ಯ, ತರಬೇತುದಾರನ ಪುತ್ರಿಯೊಂದಿಗೆ ಲೈಂಗಿಕ ಕ್ರಿಯೆ

ಮುಲ್ ಹೌಸ್(ಫ್ರಾನ್ಸ್): 2012 ರ ಒಲಿಂಪಿಕ್ಸ್ ನಲ್ಲಿ ಎರಡು ಚಿನ್ನದ ಪದಕ ಗಳಿಸಿದ್ದ ಈಜುಪಟು ಫ್ರಾನ್ಸ್ ನ ಯಾನಿಕ್ ಆಗ್ನೆಲ್ ತರಬೇತುದಾರನ ಪುತ್ರಿ, ಪರಿಚಿತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಅವರನ್ನು ಪ್ಯಾರಿಸ್ ನಲ್ಲಿ ಬಂಧಿಸಲಾಗಿತ್ತು. 2016 ರಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು ಅವರನ್ನು ಬಂಧಿಸಲಾಗಿತ್ತು. ಅವರು ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಕೀಲರು ಹೇಳಿದ್ದಾರೆ.

2012 ರ ಲಂಡನ್ ಒಲಂಪಿಕ್ಸ್ ನಲ್ಲಿ 200 ಮೀಟರ್ ಫ್ರೀಸ್ಟೈಲ್ ಮತ್ತು 48 X100 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದರು. 2013 ರ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಎರಡು ವಿಭಾಗದಲ್ಲಿ ಚಿನ್ನ ಗಳಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...