ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು 88 ಕೆಜಿ ಲಿಫ್ಟ್ ನೊಂದಿಗೆ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿದರು.
ಮೀರಾಬಾಯಿ ಚಾನು ಮಹಿಳೆಯರ ವೇಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.
ವೇಟ್ ಲಿಫ್ಟರ್ ಮೀರಾಬಾಯಿ ಚಾನು ಮಹಿಳೆಯರ 49 ಕೆಜಿ ವಿಭಾಗದಲ್ಲಿ ಒಟ್ಟು 201 ಕೆಜಿ ಎತ್ತುವ ಮೂಲಕ ಚಿನ್ನ ಗೆದ್ದು, ವಿಭಾಗದಲ್ಲಿ ಆಟದ ದಾಖಲೆ ನಿರ್ಮಿಸಿದ್ದಾರೆ.
ಇದರೊಂದಿಗೆ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ದೊರೆತಿದೆ. ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಮೀರಾಬಾಯಿ ಚಾನು ಚಿನ್ನದ ಪದಕ ಗಳಿಸಿದ್ದಾರೆ. 49 ಕೆಜಿ ವಿಭಾಗದಲ್ಲಿ ಅವರಿಗೆ ಚಿನ್ನದ ಪದಕ ದೊರೆತಿದೆ. ಭಾರತಕ್ಕೆ ಇವತ್ತು ಒಂದೇ ದಿನ ಮೂರು ಪದಕಗಳು ಬಂದಿವೆ. ವೇಟ್ ಲಿಫ್ಟಿಂಗ್ನಲ್ಲೇ ಇಂದು ಮೂರು ಪದಕಗಳನ್ನು ಭಾರತ ಗಳಿಸಿದೆ.
ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕನ್ನಡಿಗ ಪಿ ಗುರುರಾಜ ಕಂಚಿನ ಪದಕ ಜಯಿಸಿದ್ದಾರೆ.
ಪುರುಷರ 55 ಕೆಜಿ ವಿಭಾಗದಲ್ಲಿ ಭಾರತದ ವೇಟ್ ಲಿಫ್ಟರ್ ಸಂಕೇತ್ ಸರ್ಗರ್ ಬೆಳ್ಳಿ ಪದಕ ಗೆದ್ದು, ಕಾಮನ್ ವೆಲ್ತ್ ಗೇಮ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ತಂದುಕೊಟ್ಟು ಶುಭಾರಂಭ ಮಾಡಿದ್ದರು.