alex Certify ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಸುದ್ದಿ: IPL ಟೂರ್ನಿ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಸುದ್ದಿ: IPL ಟೂರ್ನಿ ಆಯೋಜನೆ

ಮುಂಬೈ: ಕೊoರೋನಾ ಆತಂಕದ ನಡುವೆಯೂ ಹಲವು ಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕಳೆದ ಮಾರ್ಚ್ 29ರಂದು ಆರಂಭವಾಗಬೇಕಿದ್ದ 2020ರ ಐಪಿಎಲ್ ಟೂರ್ನಿ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿದೆ.

ಅಕ್ಟೋಬರ್ – ನವಂಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿ ಮುಂದೂಡುವ ಸಾಧ್ಯತೆ ಹಿನ್ನೆಲೆಯಲ್ಲಿ ಬಿಸಿಸಿಐ ಹೊಸ ಯೋಜನೆ ರೂಪಿಸಿದೆ. ಐಪಿಎಲ್ ಟೂರ್ನಿಯನ್ನು ನಡೆಸಲು ಸಿದ್ಧತೆ ಕೈಗೊಂಡಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಒಂದೇ ನಗರದಲ್ಲಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ನಡೆಸಲು ಬಿಸಿಸಿಐ ನಿರ್ಧಾರ ಕೈಗೊಂಡಿದ್ದು ‘ಒನ್ ಸಿಟಿ ಒನ್ ಟೂರ್ನಮೆಂಟ್’ ಪ್ಲಾನ್ ನಡಿ ಐಪಿಎಲ್ ಆಯೋಜಿಸಲಾಗುವುದು. ಮುಂಬೈನಲ್ಲಿ ಐಪಿಎಲ್ ಟೂರ್ನಿ ಆಯೋಜಿಸಲು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಮತ್ತು ಹೋಟೆಲ್ ಗಳು ಇರುವುದರಿಂದ ಮುಂಬೈ ನಗರದಲ್ಲಿ ಈ ಸಾಲಿನ ಐಪಿಎಲ್ ಟೂರ್ನಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...