alex Certify ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಅಭಿನಂದನೆ

ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪುರುಷರ 61 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಕಂಚಿನ ಪದಕ ಗೆದ್ದಿದ್ದಾರೆ.

ಅವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.

ಪಿ. ಗುರುರಾಜ್ ಅವರ ಸಾಧನೆಗೆ ಅತೀವ ಸಂತಸವಾಗಿದೆ. ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಕಂಚು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಉತ್ತಮ ಪ್ರದರ್ಶನದ ಮೂಲಕ ಕಂಚು ಗೆದ್ದಿದ್ದು, ಅವರ ಕ್ರೀಡಾ ಪಯಣದಲ್ಲಿ ಇನ್ನೂ ಹಲವು ಮೈಲಿಗಲ್ಲುಗಳು ಮೂಡಲಿ ಎಂದು ಹಾರೈಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆಯನ್ನು ಎತ್ತರಕ್ಕೇರಿಸಿದ ಪಿ. ಗುರುರಾಜ ಅವರಿಗೆ ಹಾರ್ದಿಕ ಅಭಿನಂದನೆಗಳು. ಅವರು ಕರ್ನಾಟಕದ ಕುಂದಾಪುರದವರು ಎನ್ನುವುದು ನಾಡಿಗೆ ಹೆಮ್ಮೆಯ ಸಂಗತಿ. ಅವರಿಗೆ ಉಜ್ವಲ ಯಶಸ್ಸು ಪ್ರಾಪ್ತವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...