ಸಿಡ್ನಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ಇದೆ.
ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹಾಕ್ಲಿ ಅವರು, ಭಾರತ ಮತ್ತು ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಸರಣಿಗಾಗಿ ಕ್ರಿಕೆಟ್ ಜಗತ್ತು ಎದುರುನೋಡುತ್ತಿದೆ. ಇದು ಸಾಧ್ಯವಾಗುವುದಾದಲ್ಲಿ ವೇದಿಕೆ ಒದಗಿಸಲು ನಾವು ಸಿದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.
ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ತಂಡಗಳ ನಡುವೆ ತ್ರಿಕೋನ ಕ್ರಿಕೆಟ್ ಸರಣಿ ಆಯೋಜಿಸಲು ಅವರು ಉತ್ಸುಕರಾಗಿದ್ದಾರೆ. 2012 ರಲ್ಲಿ ಭಾರತದಲ್ಲಿ ಸೀಮಿತ ಓವರ್ ಗಳ ಸರಣಿಯಲ್ಲಿ ಪಾಕಿಸ್ತಾನ ಕೊನೆಯದಾಗಿ ಪಾಲ್ಗೊಂಡಿದ್ದು, ನಿಕ್ ಹಾಕ್ಲಿ ಅವರ ಯೋಜನೆ ಕಾರ್ಯಗತಗೊಂಡಲ್ಲಿ ಭಾರತ –ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ.