alex Certify BREAKING: ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟದಲ್ಲಿರುವ ಕ್ರಿಕೆಟಿಗ ರಿಷಬ್ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟದಲ್ಲಿರುವ ಕ್ರಿಕೆಟಿಗ ರಿಷಬ್ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಕಾರ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಷಬ್ ಪಂತ್ ಅವರ ತಾಯಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ರಿಷಬ್ ಪಂತ್ ಅವರ ತಾಯಿಯಿಂದ ಮಾಹಿತಿ ಪಡೆದ ಪ್ರಧಾನಿ ಧೈರ್ಯ ತುಂಬಿದ್ದಾರೆ. ರಿಷಬ್ ಪಂತ್ ಅವರ ತಲೆ, ಬೆನ್ನು, ಕಾಲಿಗೆ ಗಂಭೀರವಾದ ಗಾಯವಾಗಿತ್ತು. ಜೀವನ್ಮರಣದ ನಡುವೆ ಅವರು ಹೋರಾಟ ನಡೆಸುತ್ತಿದ್ದಾರೆ.

ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಐಷಾರಾಮಿ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಾಗ ರಿಷಬ್ ಪಂತ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ, ತಲೆ, ಬೆನ್ನು ಮತ್ತು ಪಾದಗಳಿಗೆ ಗಾಯಗಳಾಗಿದ್ದು, ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ರಿಷಬ್ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...