ನವದೆಹಲಿ: ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಪಂದ್ಯಾವಳಿಯ ಫೈನಲ್ ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ ಮೊದಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿ ಜಯಿಸಿ ಇತಿಹಾಸ ನಿರ್ಮಿಸಿದೆ.
ಫೈನಲ್ಸ್ ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಗೆಲುವು ಸಾಧಿಸಿದ್ದಾರೆ. ಅವರ ಸಾಧನೆಗೆ ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಕೇಂದ್ರ ಸರ್ಕಾರದಿಂದ ಒಂದು ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಲಾಗಿದೆ.
ಭಾರತಕ್ಕೆ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ ತಂಡವು ಇತಿಹಾಸವನ್ನು ಬರೆದಿದೆ. ಥಾಮಸ್ ಕಪ್ ಗೆದ್ದಿರುವುದಕ್ಕೆ ಇಡೀ ದೇಶವೇ ಸಂಭ್ರಮಿಸಿದೆ. ನಮ್ಮ ನಿಪುಣ ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಟ್ವೀಟ್ ಮಾಡಿ ಅಭಿನಂದಿಸಿದ್ದು, ತಂಡಕ್ಕೆ 1 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದಾರೆ.