![](https://kannadadunia.com/wp-content/uploads/2021/12/rohith-sharma.png)
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯ ಕಾರಣ ರೋಹಿತ್ ಶರ್ಮಾ ಅವರು ತಂಡದಿಂದ ಹೊರಗುಳಿಯುವಂತಾಗಿದೆ.
ಗಾಯಗೊಂಡ ರೋಹಿತ್ ಶರ್ಮಾ ಅವರ ಬದಲಿಗೆ ಭಾರತ ಟೆಸ್ಟ್ ತಂಡದಲ್ಲಿ ಪ್ರಿಯಾಂಕ್ ಪಾಂಚಾಲ್ ಸ್ಥಾನ ಪಡೆದುಕೊಂಡಿದ್ದಾರೆ. ಮುಂಬೈನಲ್ಲಿ ನಿನ್ನೆ ನಡೆದ ತರಬೇತಿಯ ಸಂದರ್ಭದಲ್ಲಿ ರೋಹಿತ್ ಶರ್ಮಾ ಎಡ ಮಂಡಿಗೆ ಗಾಯ ಮಾಡಿಕೊಂಡಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಮೂರು ಪಂದ್ಯಗಳ ಟೆಸ್ಟ್ ಸರಣಿಯಿಂದ ಅವರನ್ನು ಹೊರಗಿಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.